27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

ಬೆಳ್ತಂಗಡಿ: ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೇ 21 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.


ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಶಾರದಾ ವಿದ್ಯಾಲಯ, ಬಂಟ್ವಾಳ ತಾಲೂಕಿನ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರ, ಮಾಣಿಯಲ್ಲಿರುವ ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ವಿಟ್ಲದ ಜೆಸಿಸ್ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿಯಲ್ಲಿರುವ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಹಳೆಕೋಟೆಯಲ್ಲಿರುವ ವಾಣಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಡಂತ್ಯಾರುವಿನ ಸೆಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ.


ಅರ್ಹತೆ ಹಾಗೂ ಷರತ್ತುಗಳು:
ವಿದ್ಯಾರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. (ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು), ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷಗಳಿಗೆ ಮೀರಿರಬಾರದು. (2023-24 ನೇ ಸಾಲಿನ ಆದಾಯ ಪ್ರಮಾಣ ಪತ್ರ ಲಗತ್ತೀಕರಿಸಬೇಕು), ಜನನ ಪ್ರಮಾಣ ಪತ್ರವನ್ನು ಲಗತ್ತಿಸಿರಬೇಕು. 2 ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಪ್ರತಿಭಾವಂತ ವಿದ್ಯಾರ್ಥಿಯಾಗಿರಬೇಕು. ವಿದ್ಯಾರ್ಥಿಯು 5ನೇ ತರಗತಿಯಲ್ಲಿ ಶೇ. 60% ಅಂಕ ಪಡೆದಿರಬೇಕು.


ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯನ್ನು ಹಾಗೂ ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ) ಲಗತ್ತ್ತೀಕರಿಸುವುದು, ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಬಹುದು. ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ ಅಂದರೆ, ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿಗೆ ಅವಕಾಶ ಕಲ್ಪಿಸಲಾಗುವುದು. ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೆ ಅವಕಾಶ ನೀಡುವುದು. ಗರಿಷ್ಠ ರೂ. ೭೫,೦೦೦/- ಶಾಲಾ ಶುಲ್ಕವನ್ನು ಸರಕಾರದಿಂದ ಭರಿಸಲಾಗುವುದು. (ಶಾಲೆಯ ಕಡ್ಡಾಯ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರ ಭತ್ಯೆಗಳನ್ನು ಒಳಗೊಂಡಿರುತ್ತದೆ), ವಿದ್ಯಾರ್ಥಿಯ ಬ್ಯಾಂಕ್ ಪಾಸ್‌ಪುಸ್ತಕದ ಜೆರಾಕ್ಸ್ ಪ್ರತಿ. ಅಪೂರ್ಣ ಅರ್ಜಿ, ತಡವಾಗಿ ಬಂದ ಅರ್ಜಿ ಹಾಗೂ ನಿಬಂಧನೆಗಳನ್ನು ಪೂರೈಸದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.


ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಕಚೇರಿ, ಅಶೋಕನಗರ ಅಂಚೆ, ಮಂಗಳೂರು-575006 ದೂ.ಸಂಖ್ಯೆ: 0824-2451269 ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya
error: Content is protected !!