25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಪಾಲ್ತಾಡಿ ರಾಮಕೃಷ್ಣ ಆಚಾರ್ಯರು ಸ್ವರ್ಗಸ್ಥರಾದ ವಿಚಾರ ತಿಳಿದು ಖೇದವಾಯಿತು.

ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದು, ತುಳುವಿನ ಜಾನಪದ ಶಬ್ದಗಳನ್ನು ಹುಡುಕಿ ತುಳುವಿನ ಕಾರ್ಯಕ್ರಮಗಳಲ್ಲಿ ಅಧಿಕೃತವಾಗಿ ಉಪಯೋಗಿಸುವ ಕಲೆಯನ್ನು ಹೊಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ನೇತೃತ್ವದಲ್ಲಿ ಉಜಿರೆಯಲ್ಲಿ ನಡೆದ ವಿಶ್ವ ತುಳುಸಮ್ಮೇಳನದಲ್ಲಿ ಅತ್ಯಂತ ಮುತುವರ್ಜಿ ವಹಿಸಿ ಪಾಲ್ಗೊಂಡು ಸಮ್ಮೇಳನದ ಯಶಸ್ವಿಗಾಗಿ ಶ್ರಮಿಸಿರುತ್ತಾರೆ. ತುಳು ಸಾಹಿತ್ಯ ಹಾಗೂ ಭಾಷೆಯ ಬೆಳವಣಿಗೆಯಲ್ಲಿ ಇವರ ಪಾತ್ರ ಹಿರಿದಾಗಿದೆ. ತುಳುವಿನಲ್ಲಿ ಅತಿ ಹೆಚ್ಚಿನ ಕೃತಿಗಳನ್ನು ಪ್ರಕಟಿಸಿ ತುಳು ಮಾತೆಯ ಸೇವೆಯನ್ನು ಮಾಡಿರುತ್ತಾರೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಲ್ಲಿ ಸರಕಾರದ ಗಮನ ಸೆಳೆದಿರುತ್ತಾರೆ. ಅವರ ನಿಧನ ತುಳು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.


ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya
error: Content is protected !!