24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ರಾಜಕಾರಣದಲ್ಲಿ ಉತ್ತಮ ಹೆಸರನ್ನು ಸಂಪಾದಿಸಿರುವ ವಸಂತ ಬಂಗೇರ ಅವರು ತಮ್ಮ ಶಾಸಕತ್ವದ ಅವಧಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಕೆಲಸ ಮಾಡಿದ್ದಾರೆ. ಬಿಜೆಪಿ ಪಕ್ಷದ ಬೆಂಬಲದಿಂದ ಯಡಿಯೂರಪ್ಪ ಜೊತೆ, ಜೊತೆಗೆ ಶಾಸಕರಾಗಿ, ಬೆಳ್ತಂಗಡಿಯಲ್ಲಿ ಭಾಜಪವನ್ನು ಕಟ್ಟಿ ಬೆಳೆಸಿದವರು.

ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳಲ್ಲಿ ಶಾಸಕರಾಗುವುದು ರಾಜಕೀಯ ವ್ಯಕ್ತಿಗೆ ಸುಲಭವಲ್ಲ, ಆದರೆ ಬಂಗೇರರು ಮೂರು ಪಕ್ಷಗಳಿಂದ ಸ್ಪರ್ಧಿಸಿ ಶಾಸಕರಾಗಿ ಬೆಳ್ತಂಗಡಿ ಕ್ಷೇತ್ರದಲ್ಲಿ ಇತಿಹಾಸ ನಿರ್ಮಿಸಿರುವುದರ ಜೊತೆಗೆ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ. ಪ್ರಜಾಪ್ರಭುತ್ವಕ್ಕೆ ಕರಾಳವಾಗಿ ಜಾರಿಯಾಗಿದ್ದ ತುರ್ತುಪರಿಸ್ಥಿತಿ ವಿರುದ್ಧ ವಸಂತ ಬಂಗೇರರ ಹೋರಾಟ, ೧೯೮೩-೮೫ರ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮಗಳ ಜನತೆ ಮಂಗನ ಖಾಯಿಲೆಯಿಂದ ತತ್ತರಿಸಿದಾಗ ಮಿಡಿದ ಅವರ ಸಹೃದಯಿ ಮನ. ಬಗರ್ ಹುಕುಂ ಸಾಗುವಳಿದಾರರ ಪರವಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಅವರು ನಡೆಸಿದ ಜಾಥಾ ಇಂದಿಗೂ ಜನತೆಯ ಮನದಲ್ಲಿ ಹಚ್ಚ ಹಸಿರು. ಅವರ ನಿಧನ ವೈಯಕ್ತಿಕವಾಗಿಯೂ ತಾಲೂಕಿನ ಜನತೆಗೂ ಅಪಾರ ದುಃಖವನ್ನು ತಂದಿದ್ದು, ದಿವಂಗತರಿಗೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಶಾಸಕ ಹರೀಶ್ ಪೂಂಜ ತನ್ನ ನುಡಿನಮನ ಸಲ್ಲಿಸಿರುತ್ತಾರೆ.

Related posts

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

Suddi Udaya

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
error: Content is protected !!