31.1 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

ಬೆಳ್ತಂಗಡಿ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಸತತ ಒಂಬತ್ತನೇ ಬಾರಿ ಶೇಕಡ 100 ಫಲಿತಾಂಶವನ್ನು ಪಡೆದುಕೊಂಡಿದೆ.

ಶಾಲಾ ವಿದ್ಯಾರ್ಥಿಯಾದ ಚಿನ್ಮಯ್ ಜಿ.ಕೆ ರವರು 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2 ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಪ್ರತೀಕ್ ವಿ .ಎಸ್ 612 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ . ದ್ರವೀಣ್ ಭಟ್ 602, ಅನನ್ಯ ಕೆ.ಎಸ್ 60೦ ಅಂಕಗಳನ್ನು ಪಡೆದುಕೊಂಡಿರುತ್ತಾರೆ. ಪರೀಕ್ಷೆಗೆ ಹಾಜರಾದ 53 ವಿದ್ಯಾರ್ಥಿಗಳ ಪೈಕಿ 28 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿಯ, ಮುಖ್ಯೋಪಾಧ್ಯಾಯನಿ ಮತ್ತು ಶಿಕ್ಷಕ ವೃಂದ ವತಿಯಿಂದ ತುಂಬು ಹೃದಯದ ಅಭಿನಂದನೆಗಳು.

Related posts

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya
error: Content is protected !!