September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

ಬೆಳ್ತಂಗಡಿ: ಲಾಯಿಲ ಗ್ರಾಮದ ಸ್ಥಾನಿಕ ಬ್ರಾಹ್ಮಣ ಸಂಘದ ಸಭಾವನದ ಪಕ್ಕದ ರಾಜೇಶ್ ಪ್ರಭು ಎಂಬವರ ರಬ್ಬರ್ ತೋಟದಲ್ಲಿ ಮೇ.9 ರಂದು ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 75 ರಷ್ಟು ಮರಕ್ಕೆ ಹಾನಿ ಉಂಟಾಗಿದೆ.

ರಸ್ತೆಯ ಪಾರ್ಶ್ವದಲ್ಲಿರುವ ವಿದ್ಯುತ್ ಪರಿವರ್ತಕದಿಂದ ಬೆಂಕಿ ಉಗುಳಲ್ಪಟ್ಟು ತರಗೆಲೆಗೆ ಹತ್ತಿಕೊಂಡು ಬೆಂಕಿ ರಬ್ಬರ್ ತೋಟಕ್ಕೆ ಆವರಿಸಿದೆ. ಗ್ರಾ.ಪಂ ಪಿಡಿಒ‌ ಅವರು ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದಂತೆ ಧಾವಿಸಿ ಬಂದು ಬೆಂಕಿ ವ್ಯಾಪಿಸುವುದನ್ನು ತಡೆದಿದ್ದಾರೆ. ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನೀಲಯ್ಯ ಗೌಡ, ಸಿಬ್ಬಂದಿಗಳಾದ ರತನ್, ಶ್ರವಣ್, ಮುಹಮ್ಮದ್ ಸಾಬ್, ಆದಿಲ್ ಮತ್ತು ವೆಂಕಣ್ಣ ಇವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಗ್ರಾ.ಪಂ ಪಿಡಿಒ, ಕಾರ್ಯದರ್ಶಿ ಹಾಗೂ ಸದಸ್ಯರುಗಳು ಸೇರಿದಂತೆ ಸ್ಥಳೀಯರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya
error: Content is protected !!