September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ: 2023-24 ನೇ ಸಾಲಿನ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಮೌಲ್ಯಮಾಪನದ ಫಲಿತಾಂಶವು ಪ್ರಕಟವಾಗಿದ್ದು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯು ಸತತ 9ನೇ ಬಾರಿಗೆ 100% ಫಲಿತಾಂಶವನ್ನು ಪಡೆದಿರುತ್ತದೆ.

ವಿದ್ಯಾರ್ಥಿನಿ ವಿಯೋನ ರೇಗೊ 607 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳಾದ ಜಾನಿಸ್ ವಿನೀಶಾ ಡಿಸೋಜ 600 ಅಂಕ, ನಿಜಾ ಕುಲಾಲ್ 596 ಅಂಕ ಪಡೆದುಕೊಂಡಿರುತ್ತಾರೆ. ಪರೀಕ್ಷೆ ಬರೆದ 41 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಶಾಲಾ ನೂತನ ಸಂಚಾಲಕರಾದ ಅತೀ ವಂ ಫಾ ವಾಲ್ಟರ್ ಓಸ್ವಲ್ಡ್ ಡಿಮೆಲ್ಲೋ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಂ .ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದವನ್ನು ಅಭಿನಂದಿಸಿದರು.

Related posts

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!