April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2 ನೇ ರ್‍ಯಾಂಕ್ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಸಮಿತಿ ವತಿಯಿಂದ ಬೆಳ್ತಂಗಡಿಯ ವಿದ್ಯಾರ್ಥಿಯ ಮನೆಗೆ ತೆರಳಿ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ವಿದ್ಯಾರ್ಥಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಸನ್ಮಾನಿಸಲಾಯಿತು.

ಚಿನ್ಮಯನ ತಂದೆ ಬೆಳ್ತಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಗಣೇಶ್ ಭಟ್ ರವರು ಉಪಸ್ಥಿತರಿದ್ದು ಮಗನ ಸಾಧನೆ ಮತ್ತು ಅದಕ್ಕೆ ಬೆಂಬಲವಾಗಿ ನಿಂತ ಶಾಲೆಯ ಶಿಕ್ಷಕರು ಮತ್ತು ಪೋಷಕರ ಬಗ್ಗೆ SDPI ನಾಯಕರು ಅಭಿನಂದನೆ ಸಲ್ಲಿಸಿ ಶಾಲೆಗೆ, ನಾಡಿಗೆ ಗೌರವ ತಂದ ಚಿನ್ಮಯನ ಭವಿಷ್ಯ ಉಜ್ವಲವಾಗಿ, ಮುಂದಿನ ವಿದ್ಯಾಭ್ಯಾಸದಲ್ಲಿ ಇದೇ ರೀತಿಯ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಧ್ಯಕ್ಷರಾದ ನವಾಝ್ ಕಟ್ಟೆ, ಮುಖಂಡರಾದ ರಶೀದ್ ಬೆಳ್ತಂಗಡಿ, ಅಶ್ರಫ್ ಕಟ್ಟೆ, ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya
error: Content is protected !!