ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವು ಮೇ.11ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಡಾ.ಎಲ್.ಎಚ್ ಮಂಜುನಾಥರವರು ಅದ್ಬುತ ಕೆಲಸಗಳ ಮೂಲಕ ಜನರ ಪ್ರೀತಿ, ವಿಶ್ವಾಸ, ನಂಬಿಕೆ ಗಳಿಸಿದ್ದಾರೆ. ನಮ್ಮಲ್ಲಿ ಸಮಾಜಕ್ಕಾಗಿ ದುಡಿಯುವ ತುಡಿತವಿರಬೇಕು, ಏನೂ ಮಾಡಬೇಕೆಂಬುದರ ಬಗ್ಗೆ ಜ್ಞಾನವಿರಬೇಕು ಎಂದರು.
ಡಾ.ಎಲ್.ಎಚ್ ಮಂಜುನಾಥ್ ಅವರು ಮಾತನಾಡಿ ಡಾ. ಹೆಗ್ಗಡೆಯವರು ನನಗೆ ದೇವರಿದ್ದಾಗೆ. ಕಳೆದ 23 ವರ್ಷಗಳ ಕಾಲ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ ಪೂಜ್ಯರಿಗೆ ಕೃತಜ್ಞತೆ ಅರ್ಪಿಸಿದರು.
ಭಾರತೀಯ ಜೀವ ವಿಮಾ ನಿಗಮದ ಮುಂಬೈ ಕೇಂದ್ರ ಕಚೇರಿ ವ್ಯವಸ್ಥಾಪಕ ನಿರ್ದೇಶಕ ಎಂ. ಜಗನ್ನಾಥ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟಿಗಳು, ಜ್ಞಾನವಿಕಾಸ ಕಾರ್ಯಕ್ರಮ ಅಧ್ಯಕ್ಷೆ ಡಾ.ಹೇಮಾವತಿ ವೀ. ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟಿಗಳಾದ ಡಿ.ಸುರೇಂದ್ರ ಕುಮಾರ್, ವೈ ನಾಗೇಶ್ವರ ರಾವ್, ಸಂಪತ್ ಸಾಮ್ರಾಜ್ಯ, ಉದಯಕುಮಾರ್ ಶೆಟ್ಟಿ, ಶ್ಯಾಮ್ ಭಟ್, ಯೋಜನೆಯ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ್ ಆರ್.ಪೈ,ಡಾ.ಎಲ್.ಎಚ್ ಮಂಜುನಾಥ್ ಅವರ ಧರ್ಮಪತ್ನಿ ನಳಿನಿ, ಪುತ್ರ ಡಾ.ರೋಹನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸುಪ್ರೀಯಾ ಹರ್ಷೇಂದ್ರ ಕುಮಾರ್, ಶ್ರದ್ದಾ ಅಮಿತ್ ಹಾಗೂ ಯೋಜನೆಯ ವಿವಿಧ ವಿಭಾಗದ ಅಧಿಕಾರಿಗಳು, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ಡಾ.ಎಲ್.ಎಚ್ ಮಂಜುನಾಥ್ ದಂಪತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಯೋಜನೆಯ ಪ್ರಾದೇಶಿಕ ಕಚೇರಿ, ಕೇಂದ್ರ ಕಚೇರಿ ಹಾಗೂ ಎಸ್.ಡಿ.ಎಂ ನ ವಿವಿಧ ವಿಭಾಗಗಳಿಂದ ಗೌರವಿಸಲಾಯಿತು.
ಯೋಜನೆ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪೂಜಾ ಪಕ್ಕಳ, ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಸಮುದಾಯ ವಿಭಾಗದ ಅಭಿವೃದ್ಧಿ ಅಧಿಕಾರಿ ಆನಂದ ಸುವರ್ಣ ವಂದಿಸಿದರು.