37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ, ಶ್ರೀ ಗಣಪತಿ ದೇವರಿಗೆ ದೃಢ ಕಲಶ, ನಾಗ ದೇವರ ಸನ್ನಿಧಿಯಲ್ಲಿ ತನುತರ್ಪಣೆ ಮೇ 11ರಂದು ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಮೇ 10ರಂದು ಸಂಜೆ ವಾಸ್ತು ರಕ್ಷೋಘ್ನ ಹೋಮ, ಮೇ 11ರಂದು ಬೆಳಿಗ್ಗೆ ಗಣಹೋಮ, ಬಿಂಬ ಶುದ್ದಿ, ಕಲಶ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾ ಪೂಜೆ, ನಾಗ ದೇವರಲ್ಲಿ ತನುತರ್ಪಣೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಕೆ. ಧನಂಜಯ ರಾವ್, ಪ್ರಧಾನ ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ಆಡಳಿತಾಧಿಕಾರಿ ಮೋಹನ ಬಂಗೇರ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಲೋಕೇಶ್ ರಾವ್, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಬಿ. ಕೆ.ರಾಜಶೇಖರ ರಾವ್, ಪ್ರಧಾನ ಕಾರ್ಯದರ್ಶಿ ಡಿ. ದಿನೇಶ್ ಗೌಡ, ಕೋಶಾಧಿಕಾರಿ ಕೆ.ವಾಸುದೇವ ರಾವ್ ಕಕ್ಕೆನೇಜಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯಚಂದ್ರ ಸೇನೆರೆಬೆಟ್ಟು, ಕಾರ್ಯದರ್ಶಿ ಜ್ಯೋತಿಲಕ್ಷ್ಮೀ ಕಿಲ್ಲೂರು, ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಅರ್ಚಕರು, ವಿಲಯದವರು ಊರವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!