23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ಮೇ 11ರ ಮಧ್ಯಾಹ್ನ ಕೆಎ 21 ಬಿ 8892 ನಂಬರಿನ ಪಿಕ್‌ಅಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವಿ. ಭರತ್ ಕುಮಾ‌ರ್ ಮತ್ತು ಸಿಬ್ಬಂದಿಗಳು; ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಮಾನುಷವಾಗಿ ತುಂಬಿ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ.

ವಾಹನ ಹಾಗೂ ಜಾನುವಾರುಗಳನ್ನು ಮುಟ್ಟುಗೋಲು ಹಾಕಿದ ಉಪ್ಪಿನಂಗಡಿ ಪೊಲೀಸರು ಆರೋಪಿ ವಾಹನ ಚಾಲಕ ಬಂದಾರು ಗ್ರಾಮದ ಮೈರೋಳಡ್ಕ ನಿವಾಸಿ ರಕ್ಷಿತ್ (25) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Related posts

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya
error: Content is protected !!