29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆಗೆ ಸಂತಾಪ ಸೂಚಿಸಲಾಯಿತು.

ಸಂಘದ ಬೆಳವಣಿಗೆಯ ಹಂತ ಹಂತದಲ್ಲೂ ಸಹಕಾರ ನೀಡಿರುವ ಬಂಗೇರರ ಸಹಕಾರಗಳನ್ನು ಸ್ಮರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮಾತನಾಡಿ ಸಂಘದ ಬೆಳವಣಿಗೆಗೆ ಅವರ ಶಾಸಕತ್ವದ ಸಮಯದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ನಾಗಪ್ರಸಾದ್ ಕುಂಠಿನಿ, ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು‌.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya
error: Content is protected !!