23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆಗೆ ಸಂತಾಪ ಸೂಚಿಸಲಾಯಿತು.

ಸಂಘದ ಬೆಳವಣಿಗೆಯ ಹಂತ ಹಂತದಲ್ಲೂ ಸಹಕಾರ ನೀಡಿರುವ ಬಂಗೇರರ ಸಹಕಾರಗಳನ್ನು ಸ್ಮರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮಾತನಾಡಿ ಸಂಘದ ಬೆಳವಣಿಗೆಗೆ ಅವರ ಶಾಸಕತ್ವದ ಸಮಯದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ನಾಗಪ್ರಸಾದ್ ಕುಂಠಿನಿ, ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು‌.

Related posts

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya
error: Content is protected !!