24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale  ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿ ವರ್ಷ ಇದನ್ನು ಆಚರಿಸಿಕೊಂಡು ಬರುತ್ತಿದ್ದು , ಈ ವರ್ಷ ಕೂಡ ಕೆಲವು ವಿಶೇಷತೆಗಳನ್ನು ಒಳಗೊಂಡಂತೆ ದಾದಿಯರ ದಿನ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆನಕ ಹೆಲ್ತ್ ಸೆಂಟರ್ ನ ವೈದ್ಯಕೀಯ ನಿರ್ದೇಶಕರಾದ ಡಾ| ಗೋಪಾಲಕೃಷ್ಣ. ಕೆ ರವರು ಮಾತನಾಡುತ್ತ ಒಂದು ಆಸ್ಪತ್ರೆ ಸರಿಯಾದ ರೀತಿಯಲ್ಲಿ ರೋಗಿಗಳಿಗೆ ಶುಶ್ರೂಷೆ ನೀಡಲು ದಾದಿಯರ ಕರ್ತವ್ಯ ಮಹತ್ವವಾದದ್ದು, ಅವರು ಆಸ್ಪತ್ರೆಯ ಹೃದಯವಿದ್ದಂತೆ. ನಮ್ಮ ಆಸ್ಪತ್ರೆಯು ಈ ಹಂತ ತಲುಪಲು ಇಲ್ಲಿ ಸೇವೆಸಲ್ಲಿಸುತ್ತಿರುವ ದಾದಿಯರ ಕರ್ತವ್ಯ ಶ್ಲಾಘನೀಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ 35 ವರ್ಷ ಸೇವೆಸಲ್ಲಿಸಿ ನಿವೃತ್ತರಾದ ಹಿರಿಯ ದಾದಿ ಶ್ರೀಮತಿ ಫಿಲೋಮಿನಾರವರನ್ನು ಅವರು ನೀಡಿದ ಸೇವೆಯನ್ನು ಸ್ಮರಿಸಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತಿ ದಂಪತಿಗಳು ಶಾಲುಹೊದಿಸಿ ಫಲಪುಷ್ಪ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.


ಸಿಸ್ಟೆರ್ ಅಶ್ವಿನಿ.ಕೆ ಯವರು ಈ ದಿನದ ಮಹತ್ವ ಕುರಿತು ಮಾಹಿತಿ ನೀಡಿದರು. ಸಿಸ್ಟರ್ ಅನಿಲ ಬೆನ್ನಿ ಯವರು ಆಸ್ಪತ್ರೆಯ ಎಲ್ಲ ದಾದಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಆಸ್ಪತ್ರೆಯ ಪಿ.ಅರ್. ಓ ಎಸ್. ಜಿ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಡಾ| ಭಾರತಿ ಜಿ. ಕೆ ಯವರು ಧನ್ಯವಾದ ಸಮರ್ಪಿಸಿದರು. ಕೊನೆಯಲ್ಲಿ ಆಸ್ಪತ್ರೆಯ ದಾದಿಯರು ಮತ್ತು ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Related posts

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya
error: Content is protected !!