24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya
error: Content is protected !!