24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

ಕೊಕ್ಕಡ: ಕುಡಿದ ಮತ್ತಿನಲ್ಲಿ ಪಶುಪರಿವೀಕ್ಷಕ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.‌ ‌‌ಅನಾರೋಗ್ಯದಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ಕೊಕ್ಕಡಕ್ಕೆ ಬಂದ ಕೃಷ್ಣ ಅವರಿಗೆ ಅಲ್ಲೇ ಕುಡಿದ ಮತ್ತಿನಲ್ಲಿದ್ದ ಕೊಕ್ಕಡದ ಪಶುಪರಿವೀಕ್ಷಕ ಡಾ.ಕುಮಾರ್ ಎಂಬವರು ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಅಸ್ವಸ್ಥ ಗೊಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ದೆಂದು ವರದಿಯಾಗಿದೆ. ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಸಹೋದರ ಇದ್ದಾರೆ.

Related posts

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya
error: Content is protected !!