23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Related posts

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!