22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ ಎಂಬವರೇ ಚಿನ್ನಾಭರಣ ನಗದು ಕಳೆದುಕೊಂಡವರಾಗಿದ್ದಾರೆ. ಇವರು ಮೇ 15 ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ದೇವರ ದರ್ಶನ ಮುಗಿಸಿ ಸೌತಡ್ಕ ದೇವಸ್ಥಾನಕ್ಕೆ ಹೋಗಿದ್ದಾರೆ. ಧರ್ಮಸ್ಥಳ ದಿಂದ ಹೊರಡುವ ವೇಳೆ ಅವರ ಬ್ಯಾಗಿನಲ್ಲಿ ಇಟ್ಟಿದ್ದ ಪರ್ಸಿನಲ್ಲಿ ಚಿನ್ನಾಭರಣ ಹಾಗೂ ನಗದು ಇತ್ತು. ಸೌತಡ್ಕ ದೇವಸ್ಥಾನ ತಲುಪಿ ಅಂಗಡಿಯಲ್ಲಿ ಹಣಕೊಡಲು ಪರ್ಸ್ ಹುಡುಕಿದಾಗ ಪರ್ಸ್ ನಾಪತ್ತೆಯಾಗಿತ್ತು.‌ಪರ್ಸಿನಲ್ಲಿ ಇದ್ದ 2,16,000 ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ನಗದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya
error: Content is protected !!