24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಯಾವುದೋ ವೈಯುಕ್ತಿಕ ಕಾರಣಕ್ಕೆ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಕುರ್ಲೊಟ್ಟು ಎಂಬಲ್ಲಿ ನಡೆದಿದೆ.
ಹೊಸಂಗಡಿ ಗ್ರಾಮದ ಕುರ್ಲೊಟ್ಟು ಸುದೆಕಾರ್ ಮನೆ ನಿವಾಸಿ ಅಬೂಬಕ್ಕರ್ (54ವ) ಆತ್ಮಹತ್ಯೆ ಮಾಡಿಕೊಂಡವರು.

ಈ ಸಂಬಂಧ ಮೃತರ ಪತ್ನಿ ಹಾಜಿರಾ ವೇಣೂರು ಪೊಲೀಸರಿಗೆ ದೂರು ನೀಡಿ, ಮೇ.16 ರಂದು ಮಧ್ಯಾಹ್ನ 12.30 ರಿಂದ 4 ಗಂಟೆಯ ಮಧ್ಯೆ ಅವಧಿಯಲ್ಲಿ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ತನ್ನ ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಬೀಡಿ ಬ್ರಾಂಚ್‌ ಕಟ್ಟಡದ ಮಾಡಿನ ಅಡ್ಡಕ್ಕೆ ನೈಲಾನ್‌ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂದು ನೀಡಿದ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಕೊಕ್ಕಡ : ಶ್ರೀ ರಾಮ‌ ಸೇವಾ ಮಂದಿರಕ್ಕೆ ಅಡುಗೆ ಪಾತ್ರೆ, ಸಾಮಾಗ್ರಿಗಳ ಕೊಡುಗೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya
error: Content is protected !!