23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಹಾಗೂ ಜಿಲ್ಲೆಯ ಕೊನೆಯ ಭಾಗವಾದ ಮಲವಂತಿಗೆ ಗ್ರಾಮದ ಎಳನೀರಿನಲ್ಲಿ ಶನಿವಾರ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ ಜರಗಿತು.

ಎಳನೀರಿನಲ್ಲಿ ಪ್ರಪ್ರಥಮ ಬಾರಿಗೆ ಅಲ್ಲಿನ ಸಮುದಾಯ ಭವನದಲ್ಲಿ ನಡೆದ ಸಾಹಿತ್ಯಕ್ಕೆ ಸಂಬಂಧ ಪಟ್ಟ ಈ ಕಾರ್ಯಕ್ರಮವನ್ನು ಉಜಿರೆ ಎಸ್ ಡಿಎಂ ಕಾಲೇಜಿನ ಕಾಲೇಜಿನ ಪ್ರಿನ್ಸಿಪಾಲ್ ಡಾ.ಬಿ.ಎ. ಕುಮಾರ್ ಹೆಗ್ಡೆ ಉದ್ಘಾಟಿಸಿ ಮಾತನಾಡಿ “ಸಾಹಿತ್ಯ, ಸಂಗೀತ, ಕಲೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಸಾಹಿತ್ಯವು ನಮ್ಮ ಬದುಕನ್ನು ಶ್ರೀಮಂತ ಗೊಳಿಸುತ್ತದೆ. ಎಳನೀರಿನಂತಹ ಸುಂದರ ಪರಿಸರದಲ್ಲಿ ಇನ್ನಷ್ಟು ಹೆಚ್ಚಿನ ಸಾಹಿತ್ಯ ಕಾರ್ಯಕ್ರಮಗಳು ನಡೆಯಬೇಕು” ಎಂದು ಹೇಳಿದರು.

ಸಾಹಿತಿ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡಿ “ಸಾಹಿತ್ಯಕ್ಕಾಗಿ ಬದುಕು ಸಮರ್ಪಿಸಿಕೊಂಡವರ ನೆನಪು ಶಾಶ್ವತವಾಗಿರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಂ‌.ಪಿ. ಶ್ರೀನಾಥ್ ಮಾತನಾಡಿ “ಸಾಹಿತ್ಯ ಎಲ್ಲಾ ಕಡೆ ಪಸರಿಸಿ ಎಲ್ಲರನ್ನು ಮುಟ್ಟಬೇಕು. ಇದಕ್ಕಾಗಿ ಸಾಹಿತ್ಯ ಪರಿಷತ್ ಕೆಲಸ ಮಾಡುತ್ತಿದ್ದು ಜಿಲ್ಲೆಯ ಹಿಂದುಳಿದ ಪ್ರದೇಶಗಳಲ್ಲೂ ಇರುವ ಎಲೆ ಮರೆಯ ಕಾಯಿಗಳನ್ನು ಗುರುತಿಸಿ ಅವರನ್ನು ಮುನ್ನೆಲೆಗೆ ತರುವ ಪ್ರಯತ್ನ ನಡೆಯುತ್ತಿದೆ” ಎಂದರು


ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಾಧವ ಎಂ.ಕೆ. ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಪನ್ಯಾಸಕ ದಿವ ಕೊಕ್ಕಡ ಉಪಸ್ಥಿತರಿದ್ದರು.
ಸಾಹಿತಿ ವೈ. ಪ್ರೇಮಕುಮಾರ್ ಎಳನೀರು ಹಾಗೂ ಸಮಾಜಸೇವಕ ಕೇಶವ ಫಡಕೆ ದಿಡುಪೆ ಅವರನ್ನು ಸನ್ಮಾನಿಸಲಾಯಿತು.
ಮಲವಂತಿಗೆ ಗ್ರಾಪಂ ಅಧ್ಯಕ್ಷ ಪ್ರಕಾಶ್ ಜೈನ್ ಸ್ವಾಗತಿಸಿದರು. ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ವಂದಿಸಿದರು.
ಅರ್ಚಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!