September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಮಚ್ಚಿನ: ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು ಮಚ್ಚಿನ ಗ್ರಾಮದ ಹಲವಾರು ಕಡೆಗಳಲ್ಲಿ ಚರಂಡಿಗಳ ಹೂಳೆತ್ತದೆ ಮಳೆಯ ನೀರು ರಸ್ತೆಯಲ್ಲಿ ಹರಿಯುತ್ತಿದೆ.

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಹಲವಾರು ಕಡೆಗಳಲ್ಲಿ ಚರಂಡಿಗಳಲ್ಲಿ ಕಸ ಕಡ್ಡಿಗಳು ತುಂಬಿ ನೀರು ಸಂಚರಿಸಲಾಗದೆ ರಸ್ತೆಯಲ್ಲಿ ಹರಿಯುವಂತಾಗಿದೆ. ಬಳ್ಳಮಂಜ ಪಣಕಜೆ ನೂತನ ರಸ್ತೆಯ ಬದಿಯ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ, ಚರಂಡಿಗಳ ಹೂಳು ತೆರವುಗೊಳಿಸಿದಷ್ಟೇ ರಸ್ತೆಗಳು ಉಳಿಯಲು ಸಾಧ್ಯ ಹಾಗೂ ಅಪಾಯಕಾರಿ ಮರಗಳ ತೆರವು ಕಾರ್ಯವು ನಡೆಯಬೇಕಾಗಿದೆ. ಅನಾಹುತಗಳು ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ.

Suddi Udaya

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

Suddi Udaya

ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆಗೆ ಮಾತೃ ವಿಯೋಗ

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!