September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ:
ಕಂಪ್ಯೂಟರ್ ಡಿ.ಟ.ಪಿ ಮೇ 27 ರಿಂದ ಜು.10 ರವರೆಗೆ (45 ದಿನಗಳು). ಮಹಿಳೆಯರ ವಸ್ತ್ರ ವಿನ್ಯಾಸ ಮೇ 30ರಿಂದ ಜೂ 28 ರವರೆಗೆ (3೦ ದಿನಗಳು), ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಜೂ 11 ರಿಂದ ಜು.10 ರವರೆಗೆ (30 ದಿನಗಳು), ಕಂಪ್ಯೂಟರ್ ಟ್ಯಾಲಿ (ಅಕೌಂಟಿಂಗ್) ಜು, 11 ರಿಂದ ಆ. 9 ರವರೆಗೆ (30 ದಿನಗಳು) ಈ ತರಬೇತಿಗಳು ನಡೆಯಲಿದೆ.

ಜೊತೆಗೆ ಮುಂದಿನ ದಿನಗಳಲ್ಲಿ ಮೆನ್ಸ್ ಪಾರ್ಲರ್, ಮೊಬೈಲ್ ಫೋನ್ ರಿಪೇರಿ, ಮೊದಲಾದ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಎಲ್ಲಾ ತರಬೇತಿಗಳು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕ/ಯುವತಿಯರು ರುಡ್‌ಸೆಟ್ ಸಂಸ್ಥೆಯ ಇಮೇಲ್ [email protected] ಗೆ ಸಲ್ಲಿಸಬಹುದು, ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸುವವರು ಮೊಬೈಲ್ ನಂ.6364561982 ಗೆ ಸಲ್ಲಿಸಬಹುದು. ನೇರವಾಗಿ ಕೂಡ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು – ನಿರ್ದೇಶಕರು ರುಡ್‌ಸೆಟ್ ಸಂಸ್ಥೆ, ಸಿದ್ದವನ ಉಜಿರೆ, ಇವರಿಗೆ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404 , 6364561982 ಸಂಪರ್ಕಿಸಬಹುದು. ಜೊತೆಗೆ https://forms.gle/Z2xPLE1FigamcMBd9 ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ.

Related posts

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!