25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

ಬೆಳ್ತಂಗಡಿ: ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆಯು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ನ ಸಮರ್ಥ ಸೌಧ, ಭವನ, ಬೆಳ್ತಂಗಡಿ ಇಲ್ಲಿ ಮೇ 18 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಜೋನ್ ಬ್ಯಾಪಿಸ್ಟ್ ಡಿಸೋಜ ಅವರು ಮಾತಾಡಿ ಪ್ರತೀ ತಿಂಗಳ ಮೂರನೇ ಮಂಗಳವಾರ ನಡೆಯುವ ವಿಕಲಚೇತನರ ಹೊಸ ಗುರುತಿಸುವಿಕೆ ಹಾಗೂ ನವೀಕರಣದ ಶಿಬಿರವನ್ನು ಇನ್ನೂ ಪರಿಣಾಮಕಾರಿಯಾಗಿ ನಡೆಸಲು ಪುನರ್ವಸತಿ ಕಾರ್ಯಕರ್ತರು ಪ್ರತಿ ಮಾಸಿಕ ಕ್ಯಾಂಪ್ ಗಳಲ್ಲಿ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುವ ಬಗ್ಗೆ ವಿವರಣೆ ಹಾಗೂ ಹೊಸ ಪ್ರಕಾರವನ್ನು ತಿಳಿಸಿದರು. ಹಾಗೂ ಪ್ರತಿ ತಿಂಗಳಲ್ಲಿ ನಡೆಸುವ ಶಿಬಿರವು ಇನ್ನೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹಾಗೂ ಎಲ್ಲಾ ರೀತಿಯಲ್ಲಿ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಆಗಲು ಮತ್ತು ಇನ್ನೂ ಪರಿಣಾಮಕಾರಿಯಾಗಿ ಯಶಸ್ವಿ ಆಗಲು ತಾಲೂಕಿನ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ 4 ಗುಂಪುಗಳಾಗಿ ವಿಂಗಡಣೆ ಮಾಡಿದ್ದು ಪ್ರತೀ ಗುಂಪಿನಲ್ಲಿ ಒಬ್ಬರನ್ನು ನಾಯಕನಾಗಿ ಮಾಡಿ ಪ್ರತಿ ತಿಂಗಳ ಶಿಬಿರವು ಬಹಳ ಅಚ್ಚುಕಟ್ಟಾಗಿ ನಡೆಸಲು ಬೇಕಾದ ಸಲಹೆ ಸೂಚನೆಗಳನ್ನು ನೀಡಿದರು. ಮತ್ತು ತಾಲ್ಲೂಕಿನ ಎಲ್ಲಾ ಕಾರ್ಯಕರ್ತರ ಮಾಸಿಕ ವರದಿಯನ್ನು ಪಡೆದರು ಹಾಗೂ ರಾಜ್ಯ ವಿಕಲಚೇತನರ ಇಲಾಖೆಯಿಂದ ಬಂದಿರುವ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ನಗರ ಪುನರ್ವಸತಿ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya
error: Content is protected !!