29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ‌ ಬೈಕಿನಲ್ಲಿ ಬಂದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರುಕ್, ಮೈಮುನಾ, ಸೌಧಾ, ಮೈಮುನಾ ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬಂಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ ಎರಡು ಬೈಕ್ ಗಳಲ್ಲಿ ಬಂದ ಮೂವರು ಕಾರನ್ನು ತಡೆದು ಕಾರು ಚಾಲಕನ ಮೇಲೆ ಹಲ್ಲೆನಡೆಸಿ ಕಾರಿನ ಕೀಯನ್ನು ಕಸಿದುಕೊಂಡಿದ್ದಾನೆ ಅಲ್ಲದೆ ಕಾರಿನ ಇನ್ನೊಂದು ಬದಿಯ ಡೋರ್ ಅನ್ನು ಬಲವಂತವಾಗಿ ತೆರೆದ ಆರೋಪಿಗಳು ಮಹಿಳೆಯರ ಮೇಲೆ ಕೈಮಾಡಿ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿದ್ದಲ್ಲದೆ ಕಾರಿನಲ್ಲಿದ್ದವರ ಕೈಯಲ್ಲಿದ್ದ ಮೊಬೈಲ್ ಅನ್ನು ಕಸಿದುಕೊಂಡು ಎಸೆದು ಹಾನಿಗೊಳಿಸಿದ್ದಾರೆ. ಅಲ್ಲದೆ ಕಾರಿನ ಮೇಲೂ ಕಾಲಿನಿಂದ ತುಳಿದಿದ್ದಾರೆ ಈ ವೇಳೆ ಕಾರಿನಲ್ಲಿದ್ದವರು ಬೊಬ್ಬೆ ಹಾಕಿದ್ದು ದಾರಿಯಲ್ಲಿ ಬಂದ ಪರಿಚಯದವರು ವಾಹನ ನಿಲ್ಲಿಸಿ ಜಗಳ ಬಿಡಿಸಿದ್ದಾರೆ.

ಈ ವೇಳೆ ಆರೋಪಿಗಳು ಮೂವರೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಪೊಲೀಸರಿಗೆ ದೂರು ನೀಡಿದರೆ ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಪರಾರಿ ಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದೀಗ ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related posts

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya
error: Content is protected !!