September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ‌ ಬೈಕಿನಲ್ಲಿ ಬಂದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರುಕ್, ಮೈಮುನಾ, ಸೌಧಾ, ಮೈಮುನಾ ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬಂಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ ಎರಡು ಬೈಕ್ ಗಳಲ್ಲಿ ಬಂದ ಮೂವರು ಕಾರನ್ನು ತಡೆದು ಕಾರು ಚಾಲಕನ ಮೇಲೆ ಹಲ್ಲೆನಡೆಸಿ ಕಾರಿನ ಕೀಯನ್ನು ಕಸಿದುಕೊಂಡಿದ್ದಾನೆ ಅಲ್ಲದೆ ಕಾರಿನ ಇನ್ನೊಂದು ಬದಿಯ ಡೋರ್ ಅನ್ನು ಬಲವಂತವಾಗಿ ತೆರೆದ ಆರೋಪಿಗಳು ಮಹಿಳೆಯರ ಮೇಲೆ ಕೈಮಾಡಿ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿದ್ದಲ್ಲದೆ ಕಾರಿನಲ್ಲಿದ್ದವರ ಕೈಯಲ್ಲಿದ್ದ ಮೊಬೈಲ್ ಅನ್ನು ಕಸಿದುಕೊಂಡು ಎಸೆದು ಹಾನಿಗೊಳಿಸಿದ್ದಾರೆ. ಅಲ್ಲದೆ ಕಾರಿನ ಮೇಲೂ ಕಾಲಿನಿಂದ ತುಳಿದಿದ್ದಾರೆ ಈ ವೇಳೆ ಕಾರಿನಲ್ಲಿದ್ದವರು ಬೊಬ್ಬೆ ಹಾಕಿದ್ದು ದಾರಿಯಲ್ಲಿ ಬಂದ ಪರಿಚಯದವರು ವಾಹನ ನಿಲ್ಲಿಸಿ ಜಗಳ ಬಿಡಿಸಿದ್ದಾರೆ.

ಈ ವೇಳೆ ಆರೋಪಿಗಳು ಮೂವರೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಪೊಲೀಸರಿಗೆ ದೂರು ನೀಡಿದರೆ ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಪರಾರಿ ಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದೀಗ ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಪುಂಜಾಲಕಟ್ಟೆ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya
error: Content is protected !!