April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ ಅಪಾಯಕಾರಿ ಸ್ಫೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮೋದ್ ದಿಡುಪೆ ಹಾಗೂ ಶಶಿರಾಜ್ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಮೇ 18ರಂದು ರಾತ್ರಿ ಪೊಲೀಸರು ಬಂಧಿಸಿದ್ದರು.

ಇದನ್ನು ವಿರೋಧಿಸಿ ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಬಂಧಿಸಲಾಗಿದೆ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಅಗ್ರಹಿಸಿ ಬೆಳ್ತಂಗಡಿ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು. ಇದೀಗ ಸರ್ಕಾರಿ ಕರ್ತವ್ಯ ಅಡ್ಡಿಪಡಿಸಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya
error: Content is protected !!