25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ‌ ಬೈಕಿನಲ್ಲಿ ಬಂದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರುಕ್, ಮೈಮುನಾ, ಸೌಧಾ, ಮೈಮುನಾ ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬಂಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ ಎರಡು ಬೈಕ್ ಗಳಲ್ಲಿ ಬಂದ ಮೂವರು ಕಾರನ್ನು ತಡೆದು ಕಾರು ಚಾಲಕನ ಮೇಲೆ ಹಲ್ಲೆನಡೆಸಿ ಕಾರಿನ ಕೀಯನ್ನು ಕಸಿದುಕೊಂಡಿದ್ದಾನೆ ಅಲ್ಲದೆ ಕಾರಿನ ಇನ್ನೊಂದು ಬದಿಯ ಡೋರ್ ಅನ್ನು ಬಲವಂತವಾಗಿ ತೆರೆದ ಆರೋಪಿಗಳು ಮಹಿಳೆಯರ ಮೇಲೆ ಕೈಮಾಡಿ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿದ್ದಲ್ಲದೆ ಕಾರಿನಲ್ಲಿದ್ದವರ ಕೈಯಲ್ಲಿದ್ದ ಮೊಬೈಲ್ ಅನ್ನು ಕಸಿದುಕೊಂಡು ಎಸೆದು ಹಾನಿಗೊಳಿಸಿದ್ದಾರೆ. ಅಲ್ಲದೆ ಕಾರಿನ ಮೇಲೂ ಕಾಲಿನಿಂದ ತುಳಿದಿದ್ದಾರೆ ಈ ವೇಳೆ ಕಾರಿನಲ್ಲಿದ್ದವರು ಬೊಬ್ಬೆ ಹಾಕಿದ್ದು ದಾರಿಯಲ್ಲಿ ಬಂದ ಪರಿಚಯದವರು ವಾಹನ ನಿಲ್ಲಿಸಿ ಜಗಳ ಬಿಡಿಸಿದ್ದಾರೆ.

ಈ ವೇಳೆ ಆರೋಪಿಗಳು ಮೂವರೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಪೊಲೀಸರಿಗೆ ದೂರು ನೀಡಿದರೆ ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಪರಾರಿ ಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದೀಗ ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya
error: Content is protected !!