23.6 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

ಬೆಳ್ತಂಗಡಿ: ಆಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡ ಆಟೋ ಚಾಲಕ ಮೃತಪಟ್ಟ ಘಟನೆ ಮೇ 19ರಂದು ರಾತ್ರಿ ಪದ್ಮುಂಜದಲ್ಲಿ ನಡೆದಿದೆ.

ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ದಿನೇಶ್ (29 ವ) ಮೃತ ಅಟೋ ಚಾಲಕ. ಪದ್ಮುಂಜಕ್ಕೆ ಬಾಡಿಗೆಗೆಂದು ತೆರಳಿದ ಇವರ ರಿಕ್ಷಾ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಇವರ ತಲೆಗೆ ಗಂಭೀರ ಗಾಯವಾಗಿತ್ತು. ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಇವರು ಮೃತಪಟ್ಟಿದ್ದಾರೆ.

ಇವರು ಸೌಮ್ಯ ಸ್ವಭಾದವರಾಗಿದ್ದು, ಅಟೋ ರಿಕ್ಷಾ ಚಾಲನೆಯೊಂದಿಗೆ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕೊಂದರಲ್ಲಿ ಪಿಗ್ಮಿ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಾ ಎಲ್ಲರಿಗೂ ಚಿರಪರಿಚಿತರಾಗಿದ್ದರು.

ರಿಕ್ಷಾದಲ್ಲಿ ಎರಡು ಮಕ್ಕಳು ಹಾಗೂ ಅವರ ತಂದೆ ಪ್ರಯಾಣಿಕರಾಗಿದ್ದು, ಅವರು ಅಲ್ಪಸ್ವಲ್ಪ ತರಚಿದ ಗಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಅವಿವಾಹಿತರಾಗಿರುವ ಮೃತ ದಿನೇಶ್ ಅವರು ತಾಯಿ, ಓರ್ವ ಸಹೋದರನನ್ನು ಅಗಲಿದ್ದಾರೆ.

Related posts

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!