26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

ಬೆಳ್ತಂಗಡಿ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರು ನಿರ್ಬಂಧ ಹೇರಿದ್ದಾರೆ.

ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರನ್ನು ಪೊಲೀಸರು ಬಂಧಿಸಿದ್ದು, ಇದರ ವಿರುದ್ಧ ಮೇ 20ರಂದು ಬೆಳಗ್ಗೆ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲು ಯುವ ಮೋರ್ಚಾ ಸಿದ್ಧತೆ ನಡೆಸಿತ್ತು. ಬೆಳ್ತಂಗಡಿಯ ಸಂತೆಕಟ್ಟೆಯ ಅಯ್ಯಪ್ಪ ಮಂದಿರದಿಂದ ತಾಲೂಕು ಕಚೇರಿಯವರೆಗೆ ಜಾಥಾ ನಡೆಸಲೆಂದು ಕಾರ್ಯಕರ್ತರು ಸೇರಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಧ್ವನಿವರ್ಧಕ ಮೂಲಕ ನೀತಿ ಸಂಹಿತೆಯ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದು ಸೂಚನೆ ನೀಡಿದ್ದಾರೆ. ಬೆಳ್ತಂಗಡಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಪೊಲೀಸರಿಂದ ನಿರ್ಬಂಧ ಹಿನ್ನೆಲೆಯಲ್ಲಿ ಖಾಸಗಿ ಸಭಾಂಗಣದಲ್ಲಿ ಯುವ ಮೋರ್ಚಾ ಸಭೆ ನಡೆಸುವ ಸಾಧ್ಯತೆಗಳಿವೆ.

Related posts

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya
error: Content is protected !!