29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

ತೋಟತ್ತಾಡಿ : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ ), ಚಿಬಿದ್ರೆ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಮಾಜಿ ಶಾಸಕರು ಬಿಲ್ಲವ ಸಮಾಜದ ಮುಖಂಡರಾದ ಕೆ ವಸಂತ ಬಂಗೇರ ಅವರಿಗೆ ನುಡಿ ನಮನ ಕಾರ್ಯಕ್ರಮ ಸಂಘದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ ಇದರ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ನೆರಿಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ಬಂಗೇರರ ಆತ್ಮೀಯರು ಆದ ರಾಮ್ ಕುಮಾರ್ ಬೋವಿನಡಿ ಭಾಗವಹಿಸಿ, ಬಂಗೇರರ ಜೊತೆ ಸುಧೀರ್ಘ 45 ವರ್ಷ ಕಳೆದ ಗೆಳೆತನದ ಬಗ್ಗೆ ಮಾಹಿತಿಯನ್ನು ಸಭೆಗೆ ನೀಡಿದರು.

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ರಸ್ತೆಗೆ ಬಂಗೇರ ಹೆಸರಿಡಲು ನಿರ್ಣಯ : ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿ. ಹಿಂದೂ ಸಮಾಜಕ್ಕೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ. ದೇವಸ್ಥಾನಕ್ಕೆ ತೆರಳುವ ರಸ್ತೆಗೆ ಬಂಗೇರ ಹೆಸರಿಡಲು ಸರ್ವ ಸದಸ್ಯರ ಒಪ್ಪಿಗೆಯಲ್ಲಿ ನಿರ್ಣಯಿಸಲಾಯಿತು.

ವೇದಿಕೆಯಲ್ಲಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಶ್ರೀಮತಿ ಪ್ರೇಮ, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ಸುಕೇಶ್ ಪೂಜಾರಿ ಪರಾರಿ, ಬಿಲ್ಲವ ಮುಖಂಡರಾದ ಓಬಯ್ಯ ಪೂಜಾರಿ ಅಂತರ, ಸೀತಾರಾಮ ಪೂಜಾರಿ ಕಜೆ, ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ಚಿಬಿದ್ರೆ, ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ನಿಶ್ಮಿತಾ, ಯುವ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಧನಂಜಯ ಚಿಬಿದ್ರೆ, ಸಂಘದ ಪದಾಧಿಕಾರಿಗಳು, ಸಂಘದ ಸದಸ್ಯರು ಭಾಗವಹಿಸಿದರು.

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆಯ ಕಾಲೇಜಿನ ಇದರ ಉಪನ್ಯಾಸಕ ಸತೀಶ್ ಚಿಬಿದ್ರೆ ಸ್ವಾಗತಿಸಿ, ಗುರುದೇವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪವಿತ್ರ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.


Related posts

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya
error: Content is protected !!