22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಪ್ರಾರಂಭಗೊಂಡು ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮೇ 18 ರಂದು ಅಂಗಣೋತ್ಸವ, ರಾತ್ರಿ ಮಹಾ ರಥೋತ್ಸವ, ಕವಾಟ ಬಂಧನ ನಡೆಯಿತು. ಮೇ. 19 ರಂದು ಕವಾಟೋದ್ಘಾಟನೆ , ಮಹಾಪೂಜೆ, ಸಂಜೆ ತೆಪ್ಪೋತ್ಸವ, ಕಟ್ಟೆಪೂಜೆ, ವಸಂತ ಕಟ್ಟೆಯಲ್ಲಿ ಓಕುಳಿ, ಮೀನಗುಂಡಿಯಲ್ಲಿ ಅವಭೃತೋತ್ಸವ, ಧ್ವಜ ಅವರೋಹಣ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ. , ಅರ್ಚಕರು, ಸಮಿತಿಯ ಸದಸ್ಯರು, ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಇಂದು (ಮೇ 20) ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ ನಡೆಯಲಿದೆ. ಮೇ.21 ರಂದು ಪೂರ್ವಾಹ್ನ ಶುದ್ಧ ಕಲಶ ಸಂಪ್ರೋಕ್ಷಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
error: Content is protected !!