ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಪ್ರಾರಂಭಗೊಂಡು ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮೇ 18 ರಂದು ಅಂಗಣೋತ್ಸವ, ರಾತ್ರಿ ಮಹಾ ರಥೋತ್ಸವ, ಕವಾಟ ಬಂಧನ ನಡೆಯಿತು. ಮೇ. 19 ರಂದು ಕವಾಟೋದ್ಘಾಟನೆ , ಮಹಾಪೂಜೆ, ಸಂಜೆ ತೆಪ್ಪೋತ್ಸವ, ಕಟ್ಟೆಪೂಜೆ, ವಸಂತ ಕಟ್ಟೆಯಲ್ಲಿ ಓಕುಳಿ, ಮೀನಗುಂಡಿಯಲ್ಲಿ ಅವಭೃತೋತ್ಸವ, ಧ್ವಜ ಅವರೋಹಣ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ. , ಅರ್ಚಕರು, ಸಮಿತಿಯ ಸದಸ್ಯರು, ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಇಂದು (ಮೇ 20) ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ ನಡೆಯಲಿದೆ. ಮೇ.21 ರಂದು ಪೂರ್ವಾಹ್ನ ಶುದ್ಧ ಕಲಶ ಸಂಪ್ರೋಕ್ಷಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

Related posts

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಅನಾರೋಗ್ಯದಿಂದ ದಿವಾಕರ ಕುಲಾಲ್ ನಿಧನ

Suddi Udaya

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!