25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಬೆಳ್ತಂಗಡಿ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷದ ಮತ್ತು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ 2024-25 ನೇ ಸಾಲಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ರಂತೆ ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುತ್ತದೆ.

ಅರ್ಹತೆಗಳು:ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಮೇ. 31 ರೊಳಗೆ ಅರ್ಜಿ ಸಲ್ಲಿಸಬಹುದು.

01-07-2024ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವರ್ಷ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿ ಗಳು 15 ರಿಂದ 25 ವರ್ಷ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಡೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.

ಡಿಪ್ಲೋಮಾ ಕೋರ್ಸ್ ಗೆ ಲಭ್ಯವಿರುವ ಸಂಸ್ಥೆಗಳು, ಗದಗ ಜಿಲ್ಲೆಯ, ಬೆಟಗೇರಿಯಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಗೆ 22 ಅಭ್ಯರ್ಥಿಗಳು. ತಮಿಳುನಾಡುವಿನ, ಸೇಲಂ ನಲ್ಲಿರುವ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಗೆ 17 ಅಭ್ಯರ್ಥಿಗಳು, ಆಂಧ್ರ ಪ್ರದೇಶದ, ನೆಲ್ಲೂರು ಜಿಲ್ಲೆಯ ವೆಂಕಟಗಿರಿಯಲ್ಲಿರುವ ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಗೆ 03 ಅಭ್ಯರ್ಥಿಗಳು. ಕೇರಳದ ಕಣ್ಣೂರು ನಲ್ಲಿರುವ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಗೆ 02 ಅಭ್ಯರ್ಥಿಗಳು, ಒಟ್ಟು 44 ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುತ್ತದೆ.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಫಾರಂಗಾಗಿ ಗದಗ ಜಿಲ್ಲೆಯ ಬೆಟಗೇರಿಯ ನರಸಾಪೂರ ದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪ್ರಾಂಶುಪಾಲರ ದೂರವಾಣಿ ಸಂ: 08372-297221 ಮೊಬೈಲ್ ಸಂಖ್ಯೆ: 9449162822 ಸಂಪರ್ಕಿಸಬಹುದು ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ: 9481628584/ 9449145293 ಸಂಪರ್ಕಿಸಿಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಗದಗ ಜಿಲ್ಲೆಯ ಬೆಟಗೇರಿಯ ನರಸಾಪೂರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಗೆ ಸಲ್ಲಿಸಬೇಕು. ಎಂದು ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya
error: Content is protected !!