ಬೆಳ್ತಂಗಡಿ: ಪ್ರಬುಧ್ದ ಮತದಾರರನ್ನು ಹೊಂದಿರುವ ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರೀಜೇಶ್ ಚೌಟ ಹೇಳಿದ್ದಾರೆ.
ಅವರು ಸೋಮವಾರ ಲಾಯಿಲ ಸಂಗಮ ಸಭಾಭವನದಲ್ಲಿ ನಡೆದ ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಯುಕ್ತ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ , ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿಲ್ಲಾ ಚುನಾವಣಾ ಸಹ ಸಂಚಾಲಕ ವಿಕಾಸ್ ಪುತ್ತೂರು ಮಾತನಾಡಿದರು.

ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮತಯಾಚನೆ ಮಾಡಿದರು.
ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಹಿರಿಯ ಮುಖಂಡ ಹರಿಕೃಷ್ಣ ಬಂಟ್ವಾಳ,ರಾಜ್ಯ ಪ್ರಕೋಷ್ಠ ಸಂಚಾಲಕ ದತ್ತಾತ್ರಿ ಶಿವಮೊಗ್ಗ, ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಸುನೀಲ್ ಆಳ್ವ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬಿ.ಎಸ್., ವಸಂತಿ ಮಚ್ಚಿನ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪುತ್ತೂರು ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಂಗಳೂರು ಮಂಡಲ ಅಧ್ಯಕ್ಷ ಜಗಧೀಶ್ ಆಳ್ವ, ಮೂಡಬಿದ್ರೆ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಗಣೇಶ್ ನಾವೂರು, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಬಿಲ್ಲಾಡಿ, ರಾಜ್ಯ ಹಿಂದುಳಿದ ವರ್ಗ ಮೋರ್ಚಾ ಕಾರ್ಯದರ್ಶಿ ಆರ್.ಸಿ. ನಾರಾಯಣ್, ಈಶ್ವರ್ ಕಟೀಲ್, ಬೆಳ್ತಂಗಡಿ ಮಂಡಲ ಸಹಸಂಚಾಲಕ ನಂದಕುಮಾರ್ ಇದ್ದರು. ವಿಧಾನಪರಿಷತ್ ಚುನಾವಣಾ ಮಂಡಲ ಸಂಚಾಲಕ ರಾಜೇಶ್ ಪೆಂರ್ಬುಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.