24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮೇ 20ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮೋತ್ಸವ ನಡೆಯಿತು.

ಈ ವೇಳೆಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ. , ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಪೂಜಾರಿ, ಅರ್ಚಕರು ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya
error: Content is protected !!