31.1 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರುಗಳ ಸಭೆಯು ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ ರವರು ಉದ್ಘಾಟಿಸಿ ಮಾತನಾಡಿ ಒಂದು ಕುಟುಂಬದ ಸರ್ವತೋಮುಖ ಅಭಿವೃದ್ಧಿಯೆ ಯೋಜನೆಯ ಮೂಲ ದ್ಯೇಯ, ಸುಮಾರು 40 ವರ್ಷದ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಅಮ್ಮನವರ ಮಾರ್ಗದರ್ಶನದೊಂದಿಗೆ ಪ್ರಾರಂಭಗೊಂಡ ಗ್ರಾಮಾಭಿವೃದ್ಧಿ ಯೋಜನೆಯು ಕಟ್ಟ ಕಡೆಯ ವ್ಯಕ್ತಿಗೂ ಕೂಡ ಮೂಲಸೌಕರ್ಯಗಳನ್ನು ಒದಗಿಸುವುದರೊಂದಿಗೆ ಅವರ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟು ಶ್ರಮಿಸಿದ ಪರಿಯನ್ನು ಒಕ್ಕೂಟದ ಅಧ್ಯಕ್ಷರಿಗೆ ತಿಳಿಸಿದರು. ಒಕ್ಕೂಟದ ಅಧ್ಯಕ್ಷರು ಆಯಾ ಒಕ್ಕೂಟಕ್ಕೆ ಕಣ್ಣುಗಳಿದ್ದಂತೆ, ನಿರಂತರವಾಗಿ ಗ್ರಾಮದಲ್ಲಿ ಯಾವುದೇ ಸಮಸ್ಯೆಗಳು ಬಂದಾಗ ಅಥವಾ ತೀರಾ ಸಮಸ್ಯೆಗೆ ತುತ್ತಾದಾಗ ಆ ಕುಟುಂಬದ ನೆರವಿಗೆ ನಿಂತು ಕ್ಷೇತ್ರದ ವತಿಯಿಂದ ಎಲ್ಲ ಸಹಕಾರಗಳನ್ನು ಒದಗಿಸಿಕೊಡುವಲ್ಲಿ ಅಧ್ಯಕ್ಷರ ಜವಾಬ್ದಾರಿ ಮಹತ್ತರವಾಗಿದೆ ಎಂದು ತಿಳಿಸಿದರು.


ಕಳೆದ ಎರಡು ವರ್ಷದ ಅವಧಿಯಲ್ಲಿ ನಿಕಟಪೂರ್ವ ಅಧ್ಯಕ್ಷರಾಗಿ ಸೇವೆ ನೀಡಿದ ಎಲ್ಲಾ ಅಧ್ಯಕ್ಷರಿಗೆ ಶಾಲು ಹೊದಿಸಿ ಕೃತಜ್ಞತೆಯನ್ನು ಸಲ್ಲಿಸಿ ನೂತನವಾಗಿ ಆಯ್ಕೆಯಾದ ತಾಲೂಕಿನ ಎಲ್ಲ ಒಕ್ಕೂಟದ ಅಧ್ಯಕ್ಷರಿಗೆ ಹೂ ನೀಡಿ ಅಭಿನಂದನೆಯನ್ನು ಸಲ್ಲಿಸಿದರು..

ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಕಾಸಿಂ ಮಲ್ಲಿಗೆಮನೆಯವರು ಶುಭಹಾರೈಸಿದರು. ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಚಂದ್ರಶೇಖರ್ ರವರು ಶುಭಹಾರೈಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಕೇಂದ್ರ ಸಮಿತಿಯ ಅಧ್ಯಕ್ಷ ಸೀತಾರಾಮ ಯೋಜನೆಯು ಕೈಗೊಂಡಿರುವ ಪ್ರತಿಯೊಂದು ಕಾರ್ಯಕ್ರಮವು ಸಮಾಜಮುಖಿ ಹಾಗೂ ಸಮಾಜಕ್ಕೆ ಅರ್ಪಿಸುವ ಕಾರ್ಯಕ್ರಮ ಆಗಿದೆ. ಸಮಾಜದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸೇವೆ ಮಾಡಲು ಒಕ್ಕೂಟದ ಅಧ್ಯಕ್ಷರ ಮೂಲಕವಾಗಿ ಅವಕಾಶ ಸಿಕ್ಕಿರುವುದು ನಮಗೆಲ್ಲರಿಗೂ ಸಿಕ್ಕ ಸೌಭಾಗ್ಯ ಎಂದರು.

ಕಾರ್ಯಕ್ರಮದಲ್ಲಿ ಉಜಿರೆ ವಲಯ ಅಧ್ಯಕ್ಷ ಉಮಾರಬ್ಬ, ಲಾಯಿಲ ವಲಯದ ವಲಯ ಅಧ್ಯಕ್ಷ ಬಿ.ಎ ರಜಾಕ್, ಮುಂಡಾಜೆ ವಲಯದ ವಲಯ ಅಧ್ಯಕ್ಷ ಆರ್ ವಿಜಯ್, ಕೊಕ್ಕಡ ವಲಯ ಅಧ್ಯಕ್ಷ ಸೇಸಪ್ಪ ಮೂಲ್ಯ, ನೆರಿಯ ವಲಯ ಅಧ್ಯಕ್ಷ ಸತೀಶ್,
ಧರ್ಮಸ್ಥಳ ವಲಯ ಅಧ್ಯಕ್ಷ ಮೋನಪ್ಪ ಗೌಡ ಉಪಸ್ಥಿತರಿದ್ದರು.

ತಾಲೂಕಿನ 88 ಒಕ್ಕೂಟದ ನಿಕಟಪೂರ್ವ ಹಾಗೂ ನೂತನ ಒಕ್ಕೂಟದ ಅಧ್ಯಕ್ಷರು, 9 ವಲಯದ ಮೇಲ್ವಿಚಾರಕರು, ಜ್ಞಾನವಿಕಾಸದ ಸಮನ್ವಯಾಧಿಕಾರಿ, ಲೆಕ್ಕಪರಿಶೋಧಕರು ಉಪಸ್ಥಿತರಿದ್ದರು.
ಬೆಳ್ತಂಗಡಿ ತಾಲೂಕಿನ ಯೋಜನೆಯ ಯೋಜನಾಧಿಕಾರಿಗಳಾದ ಸುರೇಂದ್ರರವರು ಸ್ವಾಗತಿಸಿದರು, ತಾಲೂಕಿನ ಕೃಷಿ ಮೇಲ್ವಿಚಾರಕ ರಾಮ್ ಕುಮಾರ್ ಮಾರ್ನಾಡ್ ನಿರೂಪಿಸಿ, ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಧನ್ಯವಾದವಿತ್ತರು.

Related posts

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya
error: Content is protected !!