September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಇಂದು (ಮೇ 21) ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.


ಮೇ 22 ರಂದು ವಾಸ್ತುಪೂಜಾವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಮೇ 23 ಅಪರಾಹ್ನ ಗಂಟೆ 2.30 ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.

Related posts

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!