24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮೇ 20ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮೋತ್ಸವ ನಡೆಯಿತು.

ಈ ವೇಳೆಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ. , ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಪೂಜಾರಿ, ಅರ್ಚಕರು ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya
error: Content is protected !!