April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ತರಬೇತಿ ಸಂಸ್ಥೆಯ ಎಲ್ಲಾ ಚಟುವಟಿಕೆಗಳ ವರದಿಗಳನ್ನು ಗಮನಿಸಿ ಹೆಗ್ಗಡೆ ದಂಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರ್ಷದ ತರಬೇತಿಗಳ ಬಗ್ಗೆ ಮಾರ್ಗದರ್ಶನ ನೀಡಿದರು.


ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ತರಬೇತಿ ಸಂಸ್ಥೆಯು ಕಳೆದ 2023-24 ನೇ ಸಾಲಿನಲ್ಲಿ 5೦52 ಶಿಬಿರಾರ್ಥಿಗಳಿಗೆ ವಿವಿಧ ರೀತಿಯಲ್ಲಿ ಸಾಮರ್ಥ್ಯಾಭಿವೃದ್ಧಿ ತರಬೇತಿ, ಕೌಶಲ್ಯಾಭಿವೃದ್ಧಿ ತರಬೇತಿ, ಭಡ್ತಿ ತರಬೇತಿ, ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ತರಬೇತಿ, ಕಂಪ್ಯೂಟರ್ ತರಬೇತಿ, ಟೈಲರಿಂಗ್ ತರಬೇತಿ, ಸಾರಿಗೊಂಡೆ, ಬ್ಲೌಸ್ ಡಿಸೈನ್, ಮೆಹಂದಿ ಡಿಸೈನ್, ಬಟ್ಟೆಚೀಲ ತರಬೇತಿ ಇತ್ಯಾದಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ವರ್ಷ ದ.ಕ. ಜಿಲ್ಲಾ ಪಂಚಾಯತ್‌ ವತಿಯಿಂದ ಸರ್ಕಾರದ ನೂತನ ಯೋಜನೆ ‘ಕೂಸಿನ ಮನೆ’ ಈ ತರಬೇತಿಯನ್ನು ನಡೆಸಲಾಗಿದ್ದು, ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ.ಆನಂದ್, ಬೆಳ್ತಂಗಡಿ ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ರವರು ಭೇಟಿ ತರಬೇತಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಪ್ರಸಕ್ತ ವರ್ಷ ಇನ್ನೂ ಹೆಚ್ಚಿನ ತರಬೇತಿಯನ್ನು ನಡೆಸುವ ಗುರಿಯನ್ನು ತರಬೇತಿ ಸಂಸ್ಥೆಯು ಹೊಂದಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!