23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ನಡೆಯುವ ಬೇಸಿಗೆ ಶಿಬಿರವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಉದ್ಘಾಟಿಸಿದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ ಯದುಪತಿ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ರೇಂಜರ್ ಲೀಡರ್ ಶ್ರೀಮತಿ ರಕ್ಷಾ ಎ, ಗೈಡ್ಸ್ ಕ್ಯಾಪ್ಟನ್ ಗಳಾದ ಶ್ರೀಮತಿ ಶೋಭಾ ನವೀನ್ ಮತ್ತು ಶ್ರೀಮತಿ ಭವ್ಯ, ಕಬ್ ಮಾಸ್ಟರ್ ಶ್ರೀಮತಿ ಹೇಮಲತಾ, ಪ್ಲಾಕ್ ಲೀಡರ್ ಶ್ರೀಮತಿ ನಮಿತಾ ಉಪಸ್ಥಿತರಿದ್ದರು.

ರೋವರ್ ಸ್ಕೌಟ್ ಲೀಡರ್ ಬೆಳಿಯಪ್ಪ ಕೆ ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಶ್ರೀಮತಿ ಸುಮಲತಾ ಧನ್ಯವಾದವಿತ್ತರು. ರೇಂಜರ್ ವಿದ್ಯಾರ್ಥಿನಿ ಸಿಂಚನ ಕಾರ್ಯಕ್ರಮ ನಿರೂಪಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

Suddi Udaya
error: Content is protected !!