25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಮೇ 22 ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಭಾರತ ದೇಶದ ಪ್ರಸಕ್ತ ಸನ್ನಿವೇಶ ಹಾಗೂ ಇದಕ್ಕಿರುವ ಪರಿಹಾರವನ್ನು ನಾಯಕರಿಗೆ ಮನವರಿಕೆ ಮಾಡಿಕೊಟ್ಟರು.
ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಸಮಾರೋಪ ಭಾಷಣವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸುಹೈಲ್ ಖಾನ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಇನಾಸ್ ರೋಡ್ರಿಗಸ್, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಫಝಲ್ ಉಜಿರೆ, ಸಾದಿಕ್ ಲಾಯಿಲ, ಕೋಶಾಧಿಕಾರಿ ಅಶ್ರಫ್ ಕಟ್ಟೆ ಹಾಗೂ ಕ್ಷೇತ್ರ ವ್ಯಾಪ್ತಿಯ ಎಲ್ಲಾ ನಾಯಕರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya
error: Content is protected !!