26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ( ನಿ ) ಇದರ ಸಹಭಾಗಿತ್ವದಲ್ಲಿ ಉಜಿರೆಯ ಎಸ್. ಪಿ ಆಯಿಲು ಮಿಲ್ ಸಭಾಂಗಣದಲ್ಲಿ ಇತ್ತೀಚೆಗೆ ನಿಧನರಾದ ಶ್ರೀಯುತ ಎಂ. ತುoಗಪ್ಪ ಗೌಡ ಇವರಿಗೆ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಜರುಗಿತು.

ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಂಜನ್ ಜಿ ಗೌಡ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶಿವಕಾಂತ ಗೌಡ, ಒಕ್ಕಲಿಗರ ಸಂಘದ ಜಿಲ್ಲಾ ಸಮಿತಿ ಸದಸ್ಯ ದಾಮೋದರ ಗೌಡ ಸುರುಳಿ, ಯುವ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ ಹಾಗೂ ಸಹಕಾರಿಯ ನಿರ್ದೇಶಕರಾದ ಜಯಂತ ಗೌಡ ಗುರಿಪಳ್ಳ, ಜಯಂತ ಗೌಡ ಓಣಿಯಾಲು, ಸಂಜೀವ ಗೌಡ ಪಾಂಚಜನ್ಯ, ಭರತ್ ಗೌಡ ಹಾನಿಬೆಟ್ಟು ಉಪಸ್ಥಿತರಿದ್ದರು.

ಒಕ್ಕಲಿಗ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು. ಕೀರ್ತಿಶೇಷರಾದ ಯಂ ತುoಗಪ್ಪ ಗೌಡ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಮಾಜದ ಗಣ್ಯರಾದ ಹೆಚ್. ರಾಮಕೃಷ್ಣ ಗೌಡ, ಸುಂದರ ಗೌಡ ಪುಡ್ಕೇತ್ತು, ವಾಮನ ಗೌಡ, ಸುರೇಶ್ ಗೌಡ ಕೂಡಿಗೆ, ದಿನೇಶ್ ಗೌಡ ಕಲ್ಲಾಜೆ, ಕೇರಿಮಾರು ಬಾಲಕೃಷ್ಣ ಗೌಡ ಇವರು ಅವರ ವ್ಯಕ್ತಿತ್ವ ಆದರ್ಶಗಳು, ಸಂಘಕ್ಕೆ ಅವರು ಸಲ್ಲಿಸಿದ ಸೇವೆಯ ಬಗ್ಗೆ ಮಾತಾಡಿ ಅವರ ಗುಣಗಾನ ಮಾಡಿ ಅವರು ತೋರಿಸಿಕೊಟ್ಟ ಆದರ್ಶಗಳನ್ನು ಪಾಲಿಸುವ ಮೂಲಕ ಅವರಿಗೆ ಗೌರವ ಸಲ್ಲಿಸುವಂತೆ ಕರೆಕೊಟ್ಟರು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಮ್ಮನಗಲಿದ ನಮ್ಮ ಸಮಾಜದ ಸದಸ್ಯರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಕಾರ್ಯಕ್ರಮವನ್ನು ಒಕ್ಕಲಿಗ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

Related posts

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!