25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಶಿಬಾಜೆ ಗ್ರಾಮದ ಪೆರ್ಲ- ಕಲ್ಲಾಜೆ ರಸ್ತೆಯ ಪತ್ತಿಮಾರ್ ಎಂಬಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ.

ಶಿಬಾಜೆ ಗ್ರಾಮದ ಕುರುಂಬು ಎಂಬಲ್ಲಿನ ಹರೀಶ್‌, ಸಕಲೇಶಪುರದ ಕೌಡಳ್ಳಿಯ ಶಿವಕುಮಾರ್, ಶಿಬಾಜೆಯ ಪತ್ತಿಮಾರ್‌ನ ಪದ್ಮನಾಭ ಬಂಧಿತರು. ಆರೋಪಿಗಳಿಂದ ಒಂದು ಸಿಂಗಲ್ ಬ್ಯಾರೆಲ್ ಬಂದೂಕು, ಮಾರುತಿ ಓಮ್ನಿ ಕಾರು ವಶಕ್ಕೆ ಪಡೆಯಲಾಗಿದೆ.

ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ರಾಜೇಶ್, ಅವಿನಾಶ್, ಶಿವಕುಮಾ‌ರ್ ಹೊಸ್ಮನಿ, ರವೀಂದ್ರ, ಬೀಟ್ ಫಾರೆಸ್ಟ‌ರ್ ನಿಂಗಪ್ಪ ಅವರಿ ಮತ್ತು ಚಾಲಕ ಕಿಶೋರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya
error: Content is protected !!