26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ 22 ರಂದು ಮಧ್ಯ ರಾತ್ರಿ ಬಳಿಕ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಕಳ್ಳತನ ನಡೆದಿರುವ ಘಟನೆ ನಡೆದಿದೆ.

ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ ತಮ್ಮ ಮಗ ವೃದ್ಧೆ ತಾಯಿ ಜತೆ ಇರುವಾಗಲೇ ತಡರಾತ್ರಿ ಹಿಂಬದಿ ಬಾಗಿಲು ಒಡೆದು ರೂಮ್ ನಲ್ಲಿರುವ ಕಪಾಟು ಹೊಡೆದು ಸುಮಾರು 20 ಪವನ್ ಚಿನ್ನ ಇತರ ದಾಖಲೆಗಳ ಬ್ಯಾಗನ್ನೇ ಎಗರಿಸಿ ಪರಾರಿ ಯಾಗಿದ್ದಾರೆ. ಕಪಾಟಿನ ಸಮೀಪವೇ ಮನೆಮಂದಿ ಮಲಗಿದ್ದರೂ ಕಳ್ಳರು ಚಾಣಾಕ್ಷತನದಿಂದ ಕದ್ದಿದ್ದು, ಮನೆಮಂದಿಗೆ ಎಚ್ಚರವಾಗಿರಲಿಲ್ಲ.

ಪ್ರೇಮಾ ಅವರ ಮನೆಯಿಂದ ಕೇವಲ 200 ಮೀಟರ್ ಸಮೀಪದಲ್ಲಿರುವ ಕರಂಬಾರು ಗ್ರಾಮದ ಮುಂಡೆಲ್ ವಿಶ್ವನಾಥ ಶೆಟ್ಟಿಯವರ ಮನೆಯಲ್ಲು ಕಳ್ಳತನ ನಡೆಸಲಾಗಿದೆ.

ಮನೆಯವರ ಸಂಬಂಧಿಕರ ಮನೆಯಲ್ಲಿ ಕೋಲ ಇರುವ ಕಾರಣ ಸಂಜೆ ತೆರಳಿದ್ದು ಮನೆಯ ಬಾಗಿಲು ಒಡೆದು 4 ಪವನ್ ಚಿನ್ನ ಕದ್ದು ಪರಾರಿ ಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ವೇಣೂರು ಠಾಣೆ ಉಪನಿರೀಕ್ಷಕ ಶ್ರೀ ಶೈಲ ಅವರ ತಂಡ ಆಗಮಿಸಿ ತನಿಖೆ ಮುಂದುವರೆಸಿದೆ.

Related posts

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya
error: Content is protected !!