ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮವು ಮೇ 23 ರಂದು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಬೆಂಗಳೂರು ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ವಹಿಸಿದರು.

ಮುಖ್ಯ ಅತಿಥಿಗಳಾಗಿ ಸೋನಿಯಾ ಯಶೋವರ್ಮ, ರೋಟರಿ ಜಿಲ್ಲಾ ಗವರ್ನರ್ ರೋ| ಎಚ್.ಆರ್. ಕೇಶವ್, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ರೋಟರಿ ಇಂದಿರಾ ನಗರ ನಿಯೋಜಿತ ಅಧ್ಯಕ್ಷೆ ಸುಪ್ರಿಯ ಕಂದಾರಿ, ರೋಟರಿ ಇಂದಿರಾ ನಗರ ಪೂರ್ವಾಧ್ಯಕ್ಷ ಜಗದೀಶ್ ಮುಗುಳಿ, ಉಜಿರೆ ಎಸ್.ಡಿ.ಎಂ ಪ್ರಾಂಶುಪಾಲರು ಡಾ. ಕುಮಾರ್ ಹೆಗ್ಡೆ, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ ಕಾರಂತ್, ಬದುಕು ಕಟ್ಟೋಣ ಬನ್ನಿ ಸಂಚಾಲಕ ಮೋಹನ್ ಕುಮಾರ್, ರಾಜೇಶ್ ಪೈ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಲಂತಿಲ, ರೋಟರಿ ಕ್ಲಬ್ ನ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ , ಶ್ರೀ ಮತಿ ಸೋನಿಯಾ ವಮ೯, ಪೂರಣ್ ವಮ೯, ಮತ್ತಿತರರು ಉಪಸ್ಥಿತರಿದ್ದರು.

ಕಾಯ೯ಕ್ರಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಅಭಿವೃದ್ಧಿ ಕಾಯ೯ಗಳ ಹಸ್ತಾಂತರ, 7ಮಂದಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, 1ನೇ ತರಗತಿಯಿಂದ 7ನೇ ತರಗತಿಯ 3,250 ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಟೀಫೀನ್ ಬಾಕ್ಸ್ ವಿತರಣೆ, 20‌ ಮಂದಿ ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಳ್ಳುವ ಕಾಯ೯ಕ್ರಮ ನಡೆಯಿತು.

ನ್ಯಾಯವಾದಿ ಧನಂಜಯ ರಾವ್ ಸ್ವಾಗತಿಸಿದರು. ಸಾಹಿತಿ ಚಂದ್ರಹಾಸ ಬಳಂಜ ಕಾಯ೯ಕ್ರಮ ನಿರೂಪಿಸಿದರು. ರಾಜೇಶ್ ಪೈ ಉಜಿರೆ ವಂದಿಸಿದರು.

ಕಾಯ೯ಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯರು, ರೋಟರಿ ಕ್ಲಬ್ ನ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!