25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

ಬಳಂಜ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ವಸಂತ ಬಂಗೇರರಿಗೆ ಬಳಂಜ ಅಭಿಮಾನಿ ಬಳಗದಿಂದ ಸಾರ್ವಜನಿಕ ನುಡಿನಮನ ಕಾರ್ಯಕ್ರಮವನ್ನು ಮೇ 23 ರಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.

ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ, ತಾಲೂಕಿನ ಅಭಿವೃದ್ಧಿಗೆ ಸಹಕಾರ ನೀಡಿ, ತನ್ನ ಜೀವನದ್ದಕ್ಕೂ ಮಾನವೀಯತೆ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿ ಕಷ್ಟವೆಂದು ಬಂದವರ ನಿಜ ಅರ್ಥದ ಜನಸೇವಕ ವಸಂತ ಬಂಗೇರರು. ಬಂಗೇರರು ಬರಿ ರಾಜಕಾರಣಿ ಮಾತ್ರವಲ್ಲ ಬಂಗೇರ ಎಂದರೆ ಭರವಸೆ, ನಂಬಿಕೆ, ಶಕ್ತಿ ಎಂದು ತಾ.ಪಂ. ಮಾಜಿ ಸದಸ್ಯ ಹೆಚ್. ಧರ್ಣಪ್ಪ ಪೂಜಾರಿ ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ತಿಮ್ಮಪ್ಪ ಪೂಜಾರಿ ತಾರಿಪಡ್ಪು, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಹಿರಯರಾದ ಉಸ್ಮಾನ್ ಬಳಂಜ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಹೆಚ್. ದೇಜಪ್ಪ ಪೂಜಾರಿ, ದಿನೇಶ್ ಪಿ.ಕೆ, ಬಳಂಜ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ಪಿ.ಕೆ, ಬಳಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ವಿಕ್ಟರ್ ಕ್ರಾಸ್ತ, ಪಂಚಾಯತ್ ಸದಸ್ಯರಾದ ರವೀಂದ್ರ ಬಿ ಅಮೀನ್, ಪ್ರಮುಖರಾದ ಯೋಗೀಶ್ ಪೂಜಾರಿ ಯೈಕುರಿ, ರಮಾನಾಥ್ ಶೆಟ್ಟಿ, ಪುರಂದರ ಪೂಜಾರಿ, ರಂಜಿತ್ ಪೂಜಾರಿ, ಪ್ರದೀಪ್ ಕಾಪಿನಡ್ಕ, ಹಾಗೂ ಬಳಂಜ, ನಾಲ್ಕೂರು, ತೆಂಕಕಾರಂದೂರು ಗ್ರಾಮದ ಅಭಿಮಾನಿಗಳು ಭಾಗವಹಿಸಿ, ನುಡಿನಮನ ಸಲ್ಲಿಸಿದರು.

Related posts

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!