25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಆಶ್ರಯದಲ್ಲಿ ಕಳೆಂಜ ಗ್ರಾಮದ ಬಂಡೇರಿಯಲ್ಲಿ ನಡೆಸಲ್ಪಡುತ್ತಿರುವ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’, ‘ಗೋನಂದಾರತಿ’ ಹಾಗೂ ಇದಕ್ಕೆ ಪೂರ್ವಭಾವಿಯಾಗಿ ನಡೆದ ‘ಗೋಗ್ರಾಸ ಹೊರೆಕಾಣಿಕೆ ಶೋಭಾಯಾತ್ರೆ” ಯ ಕಾರ್ಯಕ್ರಮಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರೂ. 5,00,000/- ಅನುದಾನದ ಮೊತ್ತದ ಡಿ.ಡಿ. ಯನ್ನು ಮೇ 25 ರಂದು ಶ್ರೀಕ್ಷೇತ್ರದ ಪರವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣರವರು ಟ್ರಸ್ಟ್‌ ನ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಇಂಜಿನೀಯರ್ ಸುರೇಶ್, ಕಳೆಂಜ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಉಮೇಶ್, ಕಳೆಂಜ ಗ್ರಾಮದ ಸೇವಾ ಪ್ರತಿನಿಧಿ ಜನಾರ್ದನ್, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಅಧ್ಯಕ್ಷ ಡಾ| ಎಂ.ಎಂ. ದಯಾಕರ್, ಟ್ರಸ್ಟ್‌ನ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗರ್ತ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿಯ ಪದಾಧಿಕಾರಿಗಳಾದ ರಮೇಶ್ ಪೂಜಾರಿ, ಕುಮಾರನಾಥ ಶೆಟ್ಟಿ ಕಲ್ಮಂಜ, ರಾಘವೇಂದ್ರ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಗೋಶಾಲೆಗೆ ನೀಡಿದ ಅನುದಾನಕ್ಕಾಗಿ ಟ್ರಸ್ಟ್ ವತಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವಪೂರ್ವಕ ಕೃತಜ್ಞತೆಗಳನ್ನು ಅರ್ಪಿಸಿದರು..

Related posts

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya
error: Content is protected !!