22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

ಕೊಯ್ಯೂರು : ಇತ್ತೀಚಿನ ದಿನಗಳಲ್ಲಿ ತಾಲೂಕಿನಲ್ಲಿ ವಿವಿಧ ಭಜನಾ ಮಂಡಳಿಗಳಿಗೆ ಭೇಟಿ ನೀಡುತ್ತಿರುವ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇಲ್ಲಿಗೆ ಭೇಟಿ ನೀಡಿದರು. ಈ ಸಂದರ್ಭ ಅವರನ್ನು ಭಜನಾ ಮಂಡಳಿಯ ಪರವಾಗಿ ದೇವಸ್ಥಾನದ ಮುಖ್ಯ ಅರ್ಚಕರು ಹಾಗೂ ಭಜನಾ ಮಂಡಳಿಯ ಗೌರವಾಧ್ಯಕ್ಷ ಅಶೋಕ್ ಕುಮಾರ್ ಭಾಂಗಿಣ್ಣಾಯ ಶಾಲು ಹೊದಿಸಿ ಗೌರವಿಸಿದರು.


ನಂತರ ತಾಲೂಕಿನಲ್ಲಿ ಈಗ ನಡೆಯುತ್ತಿರುವ ಭಜನೆಯ ಬಗ್ಗೆ ವಿವರಣೆಯನ್ನು ನೀಡುತ್ತಾ ಈಗಾಗಲೇ ಹಲವಾರು ಭಜನಾ ಮಂಡಳಿಗಳಿಂದ ಭಜನೆಯ ವ್ಯವಸ್ಥೆಯ ಬಗ್ಗೆ ಸ್ವಲ್ಪ ಬದಲಾವಣೆಯ ಬೇಡಿಕೆ ಇರುವುದರಿಂದ ತಾಲೂಕು ಭಜನಾ ಪರಿಷತ್ತಿನ ವತಿಯಿಂದ ಅತಿ ಶೀಘ್ರದಲ್ಲಿ ಇದಕ್ಕೆ ಸಂಬಂಧಪಟ್ಟವರನ್ನು ಒಗ್ಗೂಡಿಸಿ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು.

ಮಾತ್ರವಲ್ಲದೆ ಇಲ್ಲಿಯ ಭಜನಾ ಮಂಡಳಿಯ ಪದಾಧಿಕಾರಿಗಳಿಂದ ಹಾಗೂ ಸದಸ್ಯರುಗಳಿಂದ ಕೂಡ ಮಾಹಿತಿ ಸಂಗ್ರಹಿಸಿಕೊಂಡರು.

ಈ ಸಂದರ್ಭ ದೇವಸ್ಥಾನದ ಮುಖ್ಯ ಅರ್ಚಕರಾದ ಅಶೋಕ್ ಕುಮಾರ್ ಭಾಂಗಿಣ್ಣಾಯ, ಭಜನಾ ಮಂಡಳಿಯ ಕಾರ್ಯದರ್ಶಿಯಾದ ನಾರಾಯಣ ಪೂಜಾರಿ ಗುರ್ಬೋಟ್ಟು, ಕೋಶಾಧಿಕಾರಿ ಡೀಕಯ್ಯ ಗೌಡ “ಸಮೃದ್ಧಿ” ಮಲೆಕಿನ್ಯಾಜೆ ಹಾಗೂ ಭಜನಾ ತರಬೇತಿದಾರರಾದ ಹರೀಶ್ ವಿ. ನೆರಿಯ, ಭಜನಾ ಮಂಡಳಿಯ ನಿಕಟ ಪೂರ್ವ ಅಧ್ಯಕ್ಷ /ಕಾರ್ಯದರ್ಶಿಗಳು ಮತ್ತು ಭಜನಾ ಮಂಡಳಿಯ ಹಿರಿಯ ಸದಸ್ಯರುಗಳು ಮತ್ತು ಭಜನಾ ಮಂಡಳಿಯ ಎರಡು ತಂಡಗಳ ಸದಸ್ಯರುಗಳು ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.

ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಜಾಲ್ನಪ್ಪು ಸ್ವಾಗತಿಸಿ, ವಂದಿಸಿದರು.

Related posts

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya
error: Content is protected !!