ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೇ 24ರಂದು ನಡೆದಿದೆ.

ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35ವ) ಮೃತಪಟ್ಟ ಯುವಕ.

ಇವರು ಸಂಚರಿಸುತ್ತಿದ್ದ ದ್ವಿಚಕ್ರವಾಹನಕ್ಕೆ ಮೇ 21ರಂದು ಇನ್ನೋವಾ ಕಾರು ಡಿಕ್ಕಿ ಹೊಡೆದು, ತಲೆ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಗಾಯಗಳುಂಟಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ತೋಟತ್ತಾಡಿ ಗ್ರಾಮದ ಅಗರಿ ಕೃಷ್ಣಪ್ಪ ಗೌಡರ ಪುತ್ರರಾಗಿರುವ ಇವರು ಅವಿವಾಹಿತರಾಗಿದ್ದು, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ. 

Related posts

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya
error: Content is protected !!