September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರೇ ಹಣ ಕಳೆದು ಕೊಂಡವರಾಗಿದ್ದಾರೆ. ಇವರ ಊರಾದ ಗುಲ್ಬರ್ಗ ಜಿಲ್ಲೆಯ ಅಫ್ಜಲ್ ಪುರದ ಯೂನಿಯನ್ ಬ್ಯಾಂಕಿನ‌ ಖಾತೆಯಿಂದ ಹಣ ಅಪಹರಿಸಲಾಗಿದೆ.

ಮೇ 23 ರ ವರೆಗೆ ಇವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30 ರ ಬಳಿಕ ಇವರ ಮೊಬೈಲ್ ಗೆ ಎಸ್. ಎಂ.ಎಸ್.ಗಳು ಬಂದಿದ್ದು, ಒಟಿಪಿ ಬಂದಿದೆ. ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಬೆಳಿಗ್ಗೆ ಪರಿಶೀಲಿಸಿದಾಗ ಅವರ ಖಾತೆಯಲ್ಲಿದ್ದ ರೂ 3,14,000 ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆ ಗೊಂಡಿರುವುದು ಕಂಡುಬರುತ್ತಿದೆ. ಎಂದು ಅವರು ಬೆಳ್ತಂಗಡಿ ಪೋಲಿಸರಿಗೆ ದೂರು ನೀಡಲಾಗಿದ್ದಾರೆ. ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!