ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಪ್ರತಿ ತಿಂಗಳು ಉಚಿತ ರೋಗ ತಪಾಸಣಾ ಶಿಬಿರದಲ್ಲಿ ನಡೆಯುತ್ತಿದ್ದು, ಮೇ26 ರಂದು ಚರ್ಮರೋಗ ತಪಾಸಣಾ ಶಿಬಿರ ನಡೆಸಲಾಯಿತು.


ಈ ಶಿಬಿರದಲ್ಲಿ ಚರ್ಮದ ಕಲೆಗಳು, ಕಪ್ಪು ಕಲೆಗಳು, ಕೂದಲು ಉದುರುವಿಕೆ ಮತ್ತು ತಲೆಹೊಟ್ಟು, ಮಕ್ಕಳ ಚರ್ಮದ ತೊಂದರೆಗಳು, ಸೌಂದರ್ಯದ ಸಮಸ್ಯೆಗಳು, ಕುಷ್ಠರೋಗ ಸಮಸ್ಯೆ, ಗಾಯದ ಗುರುತುಗಳು, ಮೊಡವೆಗಳಿಗೆ ಚಿಕಿತ್ಸೆ, ಇಸುಬು, ಡ್ರಗ್ ಅಲರ್ಜಿ, ಸೋರಿಯಾಸಿಸ್, ತೊನ್ನುರೋಗ (ಬಿಳಿ ಮಚ್ಚೆ), ತುರಿಕೆ ಖಜ್ಜಿ, ಉಗುರು ಸಂಬಂಧಿತ ರೋಗಗಳ ತಪಾಸಣೆಯನ್ನು ಉಚಿತವಾಗಿ ನಡೆಸಲಾಯಿತು.


ಚರ್ಮರೋಗ ತಜ್ಞರಾದ ಡಾ| ಭವಿಷ್ಯ ಕೆ. ಶೆಟ್ಟಿMBBS., MD, DNB (DVL) ಶಿಬಿರ ಉದ್ಘಾಟಿಸಿ, ರೋಗಿಗಳ ತಪಾಸಣೆ ನಡೆಸಿದರು. ಶಿಬಿರದಲ್ಲಿ ರೋಗ ತಪಾಸಣೆ ಉಚಿತವಾಗಿತ್ತು. ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ನೀಡಲಾಗಿತ್ತು. ಶಿಬಿರದಲ್ಲಿ 200 ಕ್ಕೂ ಅಧಿಕ ಮಂದಿ ಭಾಗವಹಿಸಿ ಶಿಬಿರದ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದರು.

Leave a Comment

error: Content is protected !!